Difference between revisions 637046 and 639820 on knwikiನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವೂ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತ್ತಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗು ಕಾರ್ಖಾನೆಗಳಿಮ್ದ ಹೊರ ಬಿಡುವ ಕಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಉಪಯೋಗಿಸುವ ಧ್ವನಿ ವಾದಕದಿಂದ ಶಬ್ಧ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ‍್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ. ⏎ ⏎ [[ವರ್ಗ:ಪರಿಸರ]] All content in the above text box is licensed under the Creative Commons Attribution-ShareAlike license Version 4 and was originally sourced from https://kn.wikipedia.org/w/index.php?diff=prev&oldid=639820.
![]() ![]() This site is not affiliated with or endorsed in any way by the Wikimedia Foundation or any of its affiliates. In fact, we fucking despise them.
|